ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ರಜೆ ಘೋಷಿಸದ ಸಿಎಂ ವಿರುದ್ಧ ಬಿಜೆಪಿ ತೀವ್ರ ಕಿಡಿ

 ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನದಂದು ರಾಜ್ಯ ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ.

                                                                  ಸಂಗ್ರಹ ಚಿತ್ರ

Posted By : Rekha.M
Source : Online Desk

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನದಂದು ರಾಜ್ಯ ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ.

ರಜೆ ಘೋಷಿಸದಿರುವ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಇವರಿಬ್ಬರ ನಿರ್ಧಾರ ದುರ್ಯೋಧನನಂತೆಯೇ ಇದೆ ಎಂದು ಎಂದು ಹೇಳಿದ್ದಾರೆ.

ರಜಾ ಘೋಷಿಸದಿರುವ ಈ ಆಲೋಚನೆ ಸರ್ಕಾರಕ್ಕೆ ಹೇಗೆ ಬರುತ್ತದೆ ಎಂದು ನನಗೆ ತಿಳಿದಿಲ್ಲ. ಅವರ ನಿರ್ಧಾರ ದುರ್ಯೋಧನನ ನಿರ್ಧಾರದಂತಿದೆ ಎಂದು ತಿಳಿಸಿದ್ದಾರೆ.

ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಇದು ರಾಮಭಕ್ತನ ನಿರ್ಧಾರವಲ್ಲ, ರಹೀಮ್ ಭಕ್ತನ ನಿರ್ಧಾರ ಎಂದಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ''ಹಿಂದೂಗಳಿಗೆ ನೋವಾಗುತ್ತದೆ ಎಂಬ ಅಂಶವನ್ನು ಈ ಸರಕಾರ ಪರಿಗಣಿಸಿಲ್ಲ. ಈ ಮಹತ್ವದ ಕಾರ್ಯಕ್ರಮಕ್ಕೆ ಗೌರವವನ್ನು ನೀಡುತ್ತಿಲ್ಲ. ಕೆಲವು ಮುಸ್ಲಿಮರು ಕೂಡ ನಾಳೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆಂದು ಹೇಳಿದ್ದಾರೆ.

ರಾಜಕೀಯ ವಿಶ್ಲೇಷಕ ಬಿ.ಎಸ್.ಮೂರ್ತಿ ಅವರು ಮಾತನಾಡಿ, “ಇದು ಸಾಮಾನ್ಯ ಧಾರ್ಮಿಕ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ ಬಿಜೆಪಿ-ಸಂಘ ಪರಿವಾರದ ಕಾರ್ಯಕ್ರಮವಾಗಿದೆ ಎಂಬಂತೆ ತೋರುತ್ತಿದೆ. ರಾಜ್ಯ ಮುಖ್ಯಮಂತ್ರಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಿಟ್ಟು ಆವರು ಆಹ್ವಾನ ಪತ್ರಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಹೊಸ ಮಿತ್ರಪಕ್ಷ ಜೆಡಿಎಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ. ಎಲ್ಲರೂ ಭಾಗವಹಿಸಬೇಕೆಂದು ಅವರು ಬಯಸಿದರೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ರಜಾದಿನವನ್ನು ಘೋಷಿಸಬಹುದಿತ್ತು ಎಂದು ಹೇಳಿದ್ದಾರೆ.Post a Comment

Previous Post Next Post