ತೀರ್ಥಹಳ್ಳಿ: ಬಾಳೆಬೈಲು ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!

 ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ತಿಳಿದುಬಂದಿಲ್ಲ. ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post