ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

 ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. 

              ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

Posted By :Rekha.M
Source : Online Desk

ಶಿವಮೊಗ್ಗ: ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. 

ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕಂದ್ರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಹೇಳಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.Post a Comment

Previous Post Next Post