ಶಿವಮೊಗ್ಗ: ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ .

 ಮೆಸ್ಕಾಂ ಗ್ರಾಮೀಣ ಉಪವಿಭಾಗ ಸಂತೇಕಡೂರು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ  ಕಾಮಗಾರಿ ಇರುವುದರಿಂದ ಜ. 16 ರಿಂದ 18 ರವರೆಗೆ  ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

Post a Comment

Previous Post Next Post